ಹಾವೇರಿ, ನ.29: ಪ್ರಿನ್ಸಿಪಾಲ್ ನಿಂದನೆ ಆರೋಪ ಹಿನ್ನಲೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಎನ್ಸಿಜೆಸಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆದಿತ್ಯಾ(16) ಮೃತ ವಿದ್ಯಾರ್ಥಿನಿ. ಇವರು ಡೊಳ್ಳೆಶ್ವರ ಗ್ರಾಮದ ಅಜ್ಜಿ ಮನೆಯಲ್ಲಿದ್ದು ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ನ.28) ರಾತ್ರಿ ಅಡಿಕೆ ತೋಟದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.