ಮೂರು ರಾಜ್ಯಗಳ ಗೆಲುವು, ಲೋಕಸಭೆ ಚುನಾವಣೆಗೆ ದಿಕ್ಸೂಚಿ : ರೂಪಾಲಿ ಎಸ್. ನಾಯ್ಕ


ಕಾರವಾರ : ಭಾರತೀಯ ಜನತಾಪಕ್ಷ ಮಧ್ಯಪ್ರದೇಶ, ರಾಜಸ್ತಾನ ಹಾಗೂ ಛತ್ತೀಸಗಡ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವುದು ಅತ್ಯಂತ ಸಂತಸವಾಗಿದೆ. ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಸಿಕ್ಕ ಮನ್ನಣೆಯಾಗಿದೆ. ಹಾಗೂ ಇದು ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.


ಈ ಅಭೂತಪೂರ್ವ ಗೆಲುವು ಆ ರಾಜ್ಯಗಳಲ್ಲಿನ ಜನತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವ ದ್ಯೋತಕವಾಗಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸಗಡ ಜೊತೆಗೆ ತೆಲಂಗಾಣದಲ್ಲೂ ಭಾರತೀಯ ಜನತಾ ಪಕ್ಷ ಗಮನಾರ್ಹ ಸಾಧನೆ ಮಾಡಿದೆ. ಈ ರಾಜ್ಯಗಳ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ನ ಯಾವುದೇ ಗ್ಯಾರಂಟಿ ಅಥವಾ ಆಸೆ, ಆಮಿಷಗಳಿಗೆ ಬಲಿಯಾಗದೇ, ಅಭಿವೃದ್ಧಿಪರ ಆಡಳಿತಕ್ಕೆ ಮಣೆ ಹಾಕಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ದೇಶಾದ್ಯಂತ ಭಾರಿ ಬಹುಮತಗಳ ಅಂತರದಿಂದ ಗೆದ್ದು ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ.

ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ದೇಶವನ್ನು ಇನ್ನಷ್ಟು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯುವುದು ನಿಶ್ಚಿತವಾಗಿದೆ ಎಂದು ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ..