ಕಾರವಾರ: ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಖಾಲಿ ಇರುವ ಕಿರಿಯ ಸಹಾಯಕರ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕನ್ನಡ ಭಾಷಾ ಸ್ಪರ್ಧಾತ್ಮಕ ಪರೀಕ್ಷೆ ಆ.7 ರಂದು ನಡೆಯಲಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಪರೀಕ್ಷಾ ಕೇಂದ್ರದ ಸುತ್ತಲು 200 ಮೀ. ವ್ಯಾಪ್ತಿಯಲ್ಲಿ ಪರೀಕ್ಷಾ ದಿನ ಕಲಂ 144 ಜಾರಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಬೇಕು. ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಇಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಸ್ಮಾರ್ಟ್ ವಾಚ್, ವೈರ್ ಲೆಸ್ ಬ್ಲೂಟೂತ್, ಇಯರ ಫೋನ್‌ಗಳನ್ನು ನಿಷೇಧಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ದಂಡಾಧಿಕಾರಿ ತಿಳಿಸಿದ್ದಾರೆ.