ಭಾರತದ ವಿರುದ್ಧ ತವರಿನಲ್ಲಿ ನಡೆಯಲ್ಲಿರುವ 3 ಪಂದ್ಯಗಳ ಟಿ20 ಸರಣಿ, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಗೆ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದೆ. ಉಭಯ ತಂಡಗಳ ಮುಖಾಮುಖಿ 3 ಪಂದ್ಯಗಳ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಆಫ್ರಿಕಾ ಟಿ20 ತಂಡದ ನಾಯಕತ್ವವನ್ನು ಏಡೆನ್ ಮಾರ್ಕ್ರಾಮ್ ನಿರ್ವಹಿಸಲಿದ್ದಾರೆ. ಆ ಬಳಿಕ ನಡೆಯಲ್ಲಿರುವ ಏಕದಿನ ಸರಣಿಯಿಂದ ಖಾಯಂ ನಾಯಕ ತೆಂಬಾ ಬವುಮಾಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಜಾಗದಲ್ಲಿ ಏಡೆನ್ ಮಾರ್ಕ್ರಾಮ್ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದಾರೆ. ಹಾಗೆಯೇ 2 ಪಂದ್ಯಗಳ ಟೆಸ್ಟ್ ಸರಣಿಗೂ ತಂಡವನ್ನು ಪ್ರಕಟಿಸಲಾಗಿದ್ದು, ತಂಡವನ್ನು ತೆಂಬಾ ಬವುಮಾ ಮುನ್ನಡೆಸಲಿದ್ದಾರೆ.
ಬವುಮಾ, ರಬಾಡಗೆ ವಿಶ್ರಾಂತಿ
ಭಾರತ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಿಂದ ನಾಯಕ ತೆಂಬಾ ಬವುಮಾ ಮತ್ತು ಕಗಿಸೊ ರಬಾಡ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಇಬ್ಬರೂ ಆಟಗಾರರು ಭಾರತ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ವೈಟ್ ಬಾಲ್ ಕ್ರಿಕೆಟ್ಗೆ ಏಡೆನ್ ಮಾರ್ಕ್ರಾಮ್ ಅವರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಮಾರ್ಕ್ರಾಮ್ ಈ ಹಿಂದೆಯೂ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಉಳಿದಂತೆ ಟಿ20 ಸರಣಿಗೆ ಆಯ್ಕೆಯಾಗಿರುವ ಜೆರಾಲ್ಡ್ ಕೊಯೆಟ್ಜಿ, ಮಾರ್ಕೊ ಯಾನ್ಸನ್ ಮತ್ತು ಲುಂಗಿ ಎನ್‌ಗಿಡಿಗೆ ಮೂರನೇ ಟಿ20 ಮತ್ತು ಏಕದಿನ ಸರಣಿಯಿಂದ ಕೋಕ್ ನೀಡಲಾಗಿದೆ.
ಎಲ್ಲಾ ಮೂರು ಸ್ವರೂಪಗಳಿಗೆ ದಕ್ಷಿಣ ಆಫ್ರಿಕಾದ ತಂಡ
ಟಿ20 ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಮ್ಯಾಥ್ಯೂ ಬ್ರಿಟ್ಜ್ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ (ಮೊದಲೆರಡು ಪಂದ್ಯಗಳಿಗೆ), ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್ (ಮೊದಲೆರಡು ಪಂದ್ಯಗಳಿಗೆ), ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್,ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ಲಿಜಾದ್ ವಿಲಿಯಮ್ಸ್. ಲುಂಗಿ ಎನ್‌ಗಿಡಿ (ಮೊದಲೆರಡು ಪಂದ್ಯಗಳಿಗೆ).
ಏಕದಿನ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಟೋನಿ ಡಿ ಜೊರ್ಜಿ, ನಾಂಡ್ರೆ ಬರ್ಗರ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್, ಲಿಜಾದ್ ವಿಲಿಯಮ್ಸ್.
ಟೆಸ್ಟ್ ತಂಡ: ತೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ಆಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್.