ಬೆಂಗಳೂರು, (ಡಿಸೆಂಬರ್ 05): ಡಿಜಿಟಲ್ ವ್ಯವಹಾರದ ಜೊತೆ ಹ್ಯಾಕರ್ಸ್ ಹಾವಳಿ ಹೆಚ್ಚಾಗುತ್ತಿದೆ. ಅದರಂತೆ ಇದೀಗ ಹ್ಯಾಕರ್ಸ್ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ಆ್ಯ ಪ್ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು…ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯಾವಳಿ ಅಪ್ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ನ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಸೈಬರ್ ಸೆಕ್ಯುರಿಟ್ ಸಮಸ್ಯೆ ಹಿನ್ನೆಲೆ ಸದ್ಯಕ್ಕೆ ವಿಡಿಯೋ ಕಾನ್ಫರೆನ್ಸ್ ಸ್ಥಗಿತಗೊಳಿಸಲಾಗಿದೆ ಎಂದು ವಿಚಾರಣೆ ವೇಳೆ ಸಿಜೆ ಪ್ರಸನ್ನ ಬಿ. ವರಾಳೆ ಸ್ಪಷ್ಟಪಡಿಸಿದ್ದಾರೆ.