ಬೆಂಗಳೂರು, (ಡಿಸೆಂಬರ್ 06): ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸರ್ಕಾರದ ಅಪಾರ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ಸೂಚಿಸಿದ್ದಾರೆ.