ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ದೆಯಲ್ಲಿ ಸೂರಜ್ ಲಕ್ಷ್ಮೇಶ್ವರ ರಾಜ್ಯ ಮಟ್ಟಕ್ಕೆ ಆಯ್ಕೆ

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸೂರಜ್ ಲಕ್ಷ್ಮೇಶ್ವರ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ದೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ದ್ವೀತಿಯ ಪಿಯುಸಿ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಸೂರಜ್ ದ್ವೀತಿಯ ಸ್ಥಾನ ಗಳಿಸಿದ್ದಾರೆ. ಸೂರಜ್ ಸಾಧನೆಗೆ ಪ್ರಭಾರಿ ಪ್ರಾಂಶುಪಾಲರಾದ ಮಹೇಶ ನಾಯಕ ಹಾಗೂ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಗಳಾದ ಜಿ ಎಸ್ ಗೌಡ ಮತ್ತು ಕಾಲೇಜ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.