ಹಾಸನ, ಡಿ.7: ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಒಬ್ಬ ಹಸು ಸಾವನ್ನಪ್ಪಿದ್ದು, ಮೂರು ಹಸುಗಳು ಗಂಭೀರವಾಗಿ ಗಾಯಗೊಂಡಿವೆ.
ಗ್ರಾಮದಲ್ಲಿ ಒಂದೇ ವಾರದಲ್ಲಿ ಆರು ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆದಿದೆ. ಇದೀಗ ಹಾಡು ಹಗಲಿನಲ್ಲಿಯೇ ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಸೆರೆ ಹಿಡಿದು ಗ್ರಾಮಕ್ಕೆ ತಂದು ಬಿಟ್ಟಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮಕ್ಕೆ ಎಸಿಎಫ್, ಆರ್ಎಫ್ಫ್ಒ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಚಿರತೆ ಸೆರೆಗಾಗಿ ಬೋನಿಟ್ಟರೂ ಪ್ರಯೋಜನವಾಗುತ್ತಿಲ್ಲ. ಕೂಡಲೇ ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.