ಬೆಂಗಳೂರು: ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ ಮೂಲಕ ಸಿಎಂ ತಿಳಿಸಿದ್ದಾರೆ. ಇನ್ನು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ನನಗೆ ಕೋವಿಡ್ ಪರೀಕ್ಷೆಯಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ತಕ್ಷಣ ಪ್ರತ್ಯೇಕವಾಗಿದ್ದು ತನ್ನ ಸಂಪರ್ಕದಲ್ಲಿ ಇದ್ದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿಯವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುವ ಅಧಿಕೃತ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಕೊರೋನಾ ಕಂಡುಬಂದ ಕಾರಣ ದೆಹಲಿ ಪ್ರವಾಸ ರದ್ದಾಗಿದೆ.