ಅದ್ಧೂರಿ ಸ್ವಾಗತ: ದಕ್ಷಿಣ ಆಫ್ರಿಕಾ ತಲುಪಿದ ಟೀಮ್ ಇಂಡಿಯಾ ಆಟಗಾರರು

ಡಿಸೆಂಬರ್ 10 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಸುದೀರ್ಘ ಸರಣಿಗಾಗಿ ಭಾರತ ಕ್ರಿಕೆಟ್ ತಂಡವು ಡಿಸೆಂಬರ್ 6 ರಂದು ಹರಿಣಗಳ ನಾಡಿಗೆ ತೆರಳಿತು. ಇದೀಗ, ಟೀಮ್ ಇಂಡಿಯಾ ಆಟಗಾರರು ಡರ್ಬನ್ ತಲುಪಿದ್ದಾರೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಎಕ್ಸ್ ಖಾತೆಯಲ್ಲಿ ಈ ಕುರಿತ ವಿಡಿಯೋ ಹಂಚಿಕೊಂಡಿದೆ. ಇದರಲ್ಲಿ ಭಾರತೀಯ ಆಟಗಾರರಿಗೆ ದಕ್ಷಿಣ ಆಫ್ರಿಕಾದಲ್ಲಿ ಸಿಕ್ಕ ಆತ್ಮೀಯ ಸ್ವಾಗತದ ತುಣುಕು ಇದೆ.

ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಯುವ ತಂಡವನ್ನು ಹೋಟೆಲ್‌ನಲ್ಲಿ ಚಪ್ಪಾಳೆಗಳ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಸೂರ್ಯ ಕ್ಯಾಮೆರಾವನ್ನು ನೋಡುತ್ತಾ ಅಭಿಮಾನಿಗಳನ್ನು ಉದ್ದೇಶಿಸಿ, “ಹಾಯ್ ಬಾಯ್ಸ್, ದಕ್ಷಿಣ ಆಫ್ರಿಕಾಕ್ಕೆ ಸ್ವಾಗತ” ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ಒಂದು ತಿಂಗಳ ಅವಧಿಯ ಪ್ರವಾಸದಲ್ಲಿ ಭಾರತವು ಮೊದಲು T20I ಸವಾಲನ್ನು ಎದುರಿಸಲಿದೆ. ಡಿಸೆಂಬರ್ 10 ರಂದು ಡರ್ಬನ್‌ನ ಕಿಂಗ್ಸ್‌ಮೀಡ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 1 ನೇ T20I ಅನ್ನು ಆಡಲಿದೆ ಮತ್ತು ನಂತರ ಗ್ಕೆಬರ್ಹಾದಲ್ಲಿ ಎರಡನೇ ಪಂದ್ಯವನ್ನು ಆಡಲಿದೆ. ಟಿ20 ಸರಣಿಯು ಡಿಸೆಂಬರ್ 14 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಮುಕ್ತಾಯಗೊಳ್ಳುತ್ತದೆ.

ಏಕದಿನ ಸರಣಿ ಡಿಸೆಂಬರ್ 17 ರಂದು ಜೋಬರ್ಗ್‌ನಲ್ಲಿ ಪ್ರಾರಂಭವಾಗುತ್ತವೆ. ಎರಡನೇ ಏಕದಿನ ಡಿಸೆಂಬರ್ 19 ರಂದು ಬ್ಯಾಂಡ್‌ವ್ಯಾಗನ್​ನಲ್ಲಿ, ಮೂರನೇ ಪಂದ್ಯವು ಪಾರ್ಲ್‌ನಲ್ಲಿ ನಡೆಯಲಿದೆ. ಮೊದಲ ಟೆಸ್ಟ್ ಡಿಸೆಂಬರ್ 26 ರಿಂದ 30 ರವರೆಗೆ ಸೆಂಚೂರಿಯನ್‌ನಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ ಜನವರಿ 3 ರಂದು ಆರಂಭವಾಗಲಿದೆ.

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ಹಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.

ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ-ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ (ಫಿಟ್ನೆಸ್ ಅವಲಂಬಿಸಿ), ಜಸ್​ಪ್ರಿತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ.