ಜೋಯಿಡಾ : ಯಾವುದೋ ಸಮಸ್ಯೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆಯ ಬಗ್ಗೆ ಶನಿವಾರ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.
ರಾಮನಗರದ ನಿವಾಸಿ ಪೂರ್ಣಿಮಾ ಅಶೋಕ್ ಗಾವಡಾ ಎಂಬ ಮಹಿಳೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೆ ಪರಿಚಯಸ್ಥರು ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಪೂರ್ಣಿಮಾ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.