ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ 220/110/11 ಕೆವಿ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವ ಹಿನ್ನೆಲೆಯಲ್ಲಿ ಡಿಸೆಂಬರ್: 11ರಂದು ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 6:00ವರೆಗೆ ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಎಂದಿನಂತೆ ಸಹಕರಿಸಬೇಕೆಂದು ಕೆ.ಪಿ.ಟಿ.ಸಿ.ಎಲ್ ಇದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಜನಿಕಾಂತ್ ಹಾದಿಮನಿಯವರು ಮಾಧ್ಯಮದ ಮೂಲಕ ಶನಿವಾರ ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕಿನ ಜನತೆಗೆ ವಿನಂತಿಸಿದ್ದಾರೆ.