ಶಾಲೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನ.! ಕೊಠಡಿಯಲ್ಲೇ ಕುಳಿತು ಸಿಗರೇಟ್, ಮದ್ಯ ಸೇವಿಸಿದ ದುರುಳರು.!

ಯಲ್ಲಾಪುರ: ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಪಟ್ಟಣದ ಬಸ್ ನಿಲ್ದಾಣದ ಎದುರು ಇರುವ ಮಾದರಿ ಪ್ರಾಥಮಿಕ ಶಾಲೆಗೆ ನುಗ್ಗಿದ ಕಳ್ಳರು, ಕೋಣೆಯ ಬೀಗ ಮುರಿದು ಒಳ ಪ್ರವೇಶಿಸಿ, ಕಪಾಟು ಇತರ ವಸ್ತುಗಳನ್ನು ಜಾಲಾಡಿದ್ದಾರೆ. ನಂತರ ಕೊಠಡಿಯಲ್ಲಿ ಕುಳಿತು ಮದ್ಯ, ಸಿಗರೇಟ್ ಸೇವನೆ ಮಾಡಿ ಹೋಗಿದ್ದಾರೆ. ಆದರೆ ಯಾವುದೇ ವಸ್ತುಗಳನ್ನು ಕಳುವು ಮಾಡಿಲ್ಲ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮುಖ್ಯಾಧ್ಯಾಪಕ ಜಗದೀಶ ನಾಯ್ಕರ್ ಮಾಹಿತಿ ನೀಡಿದ್ದಾರೆ.