ಟಿ20 ಮಾದರಿಯಲ್ಲಿ ರೋಹಿತ್, ಪಾಂಡ್ಯ ದಾಖಲೆ ಮುರಿದ ಸೂರ್ಯ! ಮುಂದಿನ ಟಾರ್ಗೆಟ್ ಕೊಹ್ಲಿ

ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 106 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಿರುಸಿನ ಶತಕ ಬಾರಿಸಿದರು.

ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯ ‘ಪ್ಲೇಯರ್ ಆಫ್ ದಿ ಮ್ಯಾಚ್’ ಮತ್ತು ‘ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಕೂಡ ಪಡೆದರು

ಇದರೊಂದಿಗೆ ಅಧಿಕ ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿ ಗೆದ್ದವರ ಪೈಕಿ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅವರ ದಾಖಲೆಯನ್ನು ಮುರಿದಿದ್ದಾರೆ.

ವಾಸ್ತವವಾಗಿ, ಟೀಂ ಇಂಡಿಯಾ ಪರ ಅತಿ ಹೆಚ್ಚು ಬಾರಿ ‘ಪ್ಲೇಯರ್ ಆಫ್ ದಿ ಸೀರೀಸ್’ ಗೆದ್ದ ವಿಷಯದಲ್ಲಿ ಸೂರ್ಯ ಎರಡನೇ ಸ್ಥಾನವನ್ನು ತಲುಪಿದ್ದಾರೆ.

ಈ ವಿಚಾರದಲ್ಲಿ ಅವರು ರೋಹಿತ್ ಶರ್ಮಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಆಟಗಾರರನ್ನು ಹಿಂದಿಕ್ಕಿದ್ದಾರೆ.

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಆಡಿರುವ 44 ಟಿ20 ಅಂತರಾಷ್ಟ್ರೀಯ ಸರಣಿಗಳಲ್ಲಿ ಏಳು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು 30 ಟಿ20 ಅಂತರಾಷ್ಟ್ರೀಯ ಸರಣಿಗಳಲ್ಲಿ ಐದು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಮೂರನೇ ಸ್ಥಾನದಲ್ಲಿರು ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅವರು 42 ಟಿ20 ಅಂತಾರಾಷ್ಟ್ರೀಯ ಸರಣಿಗಳಲ್ಲಿ ಐದು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು, ಕೇವಲ 18ನೇ ಸರಣಿಯಲ್ಲಿ ಸೂರ್ಯ ನಾಲ್ಕನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದ್ದಾರೆ.

ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮತ್ತು ಪಾಕಿಸ್ತಾನದ ಮೊಹಮ್ಮದ್ ಹಫೀಜ್ ತಲಾ ನಾಲ್ಕು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.