ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ

ಮಂಗಳೂರು, ಡಿ.18: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವಕ್ಕೆ ಬೆಳಗ್ಗೆ 7.30ರ ಧನುಲಗ್ನ ಮುಹೂರ್ತದಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ಸಾವಿರಾರು ಭಕ್ತರು ಬ್ರಹ್ಮ ರಥೋತ್ಸವ ಕಣ್ತುಂಬಿಕೊಂಡಿದ್ದಾರೆ.

ಮಾರ್ಗಶಿರ ಮಾಸದಲ್ಲಿ ಬರುವ ಷಷ್ಠಿಯೇ ಸುಬ್ರಹ್ಮಣ್ಯ ಷಷ್ಠಿ. ಇದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ದೊಡ್ಡ ಉತ್ಸವ. ಶಿವ ಹಾಗೂ ಪಾರ್ವತಿಯರ ಮಗನಾದ ಕಾರ್ತಿಕೇಯನು ಕುಮಾರಧಾರ ತಟದಲ್ಲಿ ನೆಲೆಯಾದ ಸ್ಥಳ ಕುಕ್ಕೆ ಸುಬ್ರಹ್ಮಣ್ಯ. ಈ ಸುಬ್ರಹ್ಮಣ್ಯ ಷಷ್ಠಿಯ ಹಿಂದೆಯೂ ಒಂದು ಪೌರಾಣಿಕ ಹಿನ್ನಲೆ ಇದೆ. ಸ್ಕಂದ ಷಷ್ಠಿ ನಂತರ ಬರುವ ಆಚರಣೆಯೇ ಸುಬ್ರಹ್ಮಣ್ಯ ಷಷ್ಠಿ. ಮಾರ್ಗಶಿರ ಮಾಸದಲ್ಲಿ ಬರುವ ಈ ಷಷ್ಠಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಎಂದೂ ಪ್ರಸಿದ್ಧಿಯನ್ನು ಪಡೆದಿದೆ.