ರಾಜ್ಯ ಮಟ್ಟದಲ್ಲಿ ಸಾಧನೆ

ಅಂಕೋಲಾ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸೂರಜ್ ಲಕ್ಷ್ಮೇಶ್ವರ ರಾಜ್ಯ ಮಟ್ಟದ ಸ್ಪರ್ದೆಯಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ನಡೆದಿದ್ದು ದ್ವೀತಿಯ ಚಿತ್ರಕಲಾ ವಿಭಾಗದಲ್ಲಿ ಸೂರಜ್ ದ್ವೀತಿಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಸೂರಜ್ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಅಭಿವೃದ್ದಿ ಸಮಿತಿ, ಹಿರಿಯ ಉಪನ್ಯಾಸಕರು ಮತ್ತು ಕಾಲೇಜಿನ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ