ಕೋಲಾರ, ಡಿ.19: ಜಿಲ್ಲೆಯ ಮಾಲೂರು ತಾಲೂಕಿನ ಯಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ ಭಾರೀ ಸುದ್ದು ಮಾಡಿತ್ತು. ಇದರ ಬೆನ್ನಲ್ಲೇ ವಸತಿ ಶಾಲೆಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಶಾಲೆಯ ಆವರಣದಲ್ಲಿ ನಿರ್ಮಾಣ ಮಾಡುತ್ತಿದ್ದ ದೇವಾಲಯ ಹಾಗೂ ಪೋಷಕರು ತಂಗಲು ಶೆಡ್ ನಿರ್ಮಾಣಕ್ಕೆ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ.
ದೇವಾಲಯ ಹಾಗೂ ಪೋಷಕರು ತಂಗಲು ಶೆಡ್ ನಿರ್ಮಾಣಕ್ಕೆ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕರು ಬಲವಂತವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳ ಪೋಷಕರಿಂದ ತಲಾ 500 ರೂಪಾಯಿಯನ್ನು ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಲೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಂಗ್ರಹ ಮಾಡಿದ ಹಣ ಹಂಚಿಕೊಳ್ಳುವ ವಿಚಾರದಲ್ಲೂ ಸಿಬ್ಬಂದಿ ನಡುವೆ ಜಗಳ ನಡೆದಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಶಿವಕುಮಾರ್ ನೀಡಿದ ದೂರಿನ ಅನ್ವಯ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ