ಚೆನ್ನೈ, ಡಿ.21: ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.