ದೆಹಲಿ, ಡಿ.21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ಜೇಬುಗಳ್ಳರ ಹೇಳಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಈ ಆದೇಶವನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿಯನ್ನು ‘ಪಿಕ್‌ಪಾಕೆಟ್‌ಗಳು’ ಎಂದು ಹೇಳಿಕೆಯನ್ನು ನೀಡಿದರು. 8 ವಾರದ ಒಳಗಾಗಿ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.