ಬೆಂಗಳೂರು, (ಡಿಸೆಂಬರ್ 22): ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಚಿವರಾದ ಹಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ.