ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 78 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ.
ನಾಯಕ ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸರಣಿ ಗೆಲುವಿನೊಂದಿಗೆ ಇತಿಹಾಸ ಸೃಷ್ಟಿಸಿದೆ. ಟೀಂ ಇಂಡಿಯಾ ಪರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ನಾಯಕ ಎಂಬ ಖ್ಯಾತಿಗೆ ಕೆಎಲ್ ರಾಹುಲ್ ಭಾಜನರಾಗಿದ್ದಾರೆ.
ಕೆಎಲ್ ರಾಹುಲ್ಗಿಂತ ಮೊದಲು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2018ರಲ್ಲಿ ದಕ್ಷಿಣ ಆಫ್ರಿಕಾವನ್ನು ಸ್ವದೇಶದಲ್ಲಿ ಏಕದಿನ ಸರಣಿಯಲ್ಲಿ 5-1 ಅಂತರದಿಂದ ಸೋಲಿಸಿತ್ತು.
ಆ ಬಳಿಕ ಇದೀಗ 2023ರಲ್ಲಿ 5 ವರ್ಷಗಳ ಬಳಿಕ ಟೀಂ ಇಂಡಿಯಾ ಸರಣಿ ಗೆದ್ದ ದಾಖಲೆ ಬರೆದಿದೆ. ಈ ಸರಣಿಗೂ ಮುನ್ನ2022ರಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ದಕ್ಷಿಣ ಆಫ್ರಿಕಾ 0-3 ಅಂತರದಿಂದ ಸೋಲಿಸಿತ್ತು.
ಆಗಲೂ ಕೆಎಲ್ ರಾಹುಲ್ ನಾಯಕರಾಗಿದ್ದರು. ಆಗ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.
ಏತನ್ಮಧ್ಯೆ, ಟಿ20 ಮತ್ತು ಏಕದಿನ ಸರಣಿಯ ನಂತರ ಎರಡೂ ತಂಡಗಳು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿವೆ. ಡಿಸೆಂಬರ್ 26 ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದೆ.