ರಾಜ್ಯದಲ್ಲಿ ಮಳೆ ಕೊರತೆ, ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಕುಸಿತ

ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಮಳೆಯಾಗದ ಹಿನ್ನಲೆ ಡ್ಯಾಂಗಳಲ್ಲಿ ನೀರಿಲ್ಲ  ಸಧ್ಯ ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಾಗಿದ್ದು, ಇನ್ನೂ ಮೂರು-ನಾಲ್ಕು ದಿನ ರಾಜ್ಯದ ಬಹುತೇಕ ಕಡೆ ಮಳೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಇಲ್ಲದೆ ಜಲಾಶಯಗಳಿಗೆ ಒಳಹರಿವು ಸಂಪೂರ್ಣ ಸ್ಥಗಿತವಾಗಿದೆ. ಜಲಾಶಯಗಳ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ   ಡಿಸೆಂಬರ್​ 23ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿ. 23, 24, 26, 27ರಂದು ಒಣಹವೆಯ ವಾತಾವರಣ ಇರಲಿದೆ. ಡಿ.25 ರ ಸೋಮವಾರ ಸಂಜೆ ಇಲ್ಲವೇ ರಾತ್ರಿಯಂದು ಕರ್ನಾಟಕದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗಲು ವೇಳೆ ಒಣಹವೆಯ ವಾತಾವರಣ ಇರಲಿದೆ.