IPL 2024: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 25 ಆಟಗಾರರ ಬಲಿಷ್ಠ ಬಳಗವನ್ನು ರೂಪಿಸಿದೆ. ಈ ಇಪ್ಪತ್ತೈದು ಸದಸ್ಯರ ಪಡೆಯಲ್ಲಿ 17 ಭಾರತೀಯ ಆಟಗಾರರಿದ್ದರೆ, 8 ವಿದೇಶಿ ಪ್ಲೇಯರ್ಸ್ ಸ್ಥಾನ ಪಡೆದಿದ್ದಾರೆ.
ಈ ಎಂಟು ವಿದೇಶಿ ಆಟಗಾರರಲ್ಲಿ ಮೂವರು ಇಂಗ್ಲೆಂಡ್ ಪ್ಲೇಯರ್ಸ್ ಎಂಬುದು ವಿಶೇಷ. ಹಾಗೆಯೇ ಇಬ್ಬರು ಆಸ್ಟ್ರೇಲಿಯನ್ನರು ಕೂಡ ಆರ್ಸಿಬಿ ತಂಡದಲ್ಲಿದ್ದಾರೆ. ಇನ್ನು ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾದ ಒಬ್ಬೊಬ್ಬ ಆಟಗಾರರು ಸ್ಥಾನ ಪಡೆದಿದ್ದಾರೆ. ಹಾಗಿದ್ರೆ ಆರ್ಸಿಬಿ ತಂಡದಲ್ಲಿರುವ ಫಾರಿನ್ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ…
ಇಂಗ್ಲೆಂಡ್ ಆಟಗಾರರು: ಈ ಬಾರಿಯ ಹರಾಜಿನ ಮೂಲಕ ಆರ್ಸಿಬಿ ಇಂಗ್ಲೆಂಡ್ನ ಆಲ್ರೌಂಡರ್ ಟಾಮ್ ಕರನ್ ಅವರನ್ನು ಖರೀದಿಸಿದೆ. ಇದಕ್ಕೂ ಮುನ್ನ ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿಯನ್ನು ಆರ್ಸಿಬಿ ತಂಡದಲ್ಲಿ ಉಳಿಸಿಕೊಂಡಿತ್ತು.
ಆಸ್ಟ್ರೇಲಿಯಾ ಆಟಗಾರರು: ಆಸ್ಟ್ರೇಲಿಯಾ ಆಲ್ರೌಂಡರ್ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಕ್ಯಾಮರೋನ್ ಗ್ರೀನ್ ಸ್ಥಾನ ಪಡೆದಿದ್ದಾರೆ. ಮ್ಯಾಕ್ಸ್‌ವೆಲ್ ಅವರನ್ನು ಆರ್ಸಿಬಿ ಈ ಹಿಂದೆಯೇ ಖರೀದಿಸಿದ್ದರೆ, ಕ್ಯಾಮರೋನ್ ಗ್ರೀನ್ ಅವರನ್ನು ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಿಂದ ಟ್ರೇಡ್ ಮಾಡಿಕೊಂಡಿದೆ.
ಸೌತ್ ಆಫ್ರಿಕಾ ಆಟಗಾರ: ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಸೌತ್ ಆಫ್ರಿಕಾ ಕ್ರಿಕೆಟಿಗ. ಸೌತ್ ಆಫ್ರಿಕಾ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿರುವ ಡುಪ್ಲೆಸಿಸ್ ಈ ಬಾರಿ ಕೂಡ ಆರ್ಸಿಬಿ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ನ್ಯೂಝಿಲೆಂಡ್ ಆಟಗಾರ: ಆರ್ಸಿಬಿ ಫ್ರಾಂಚೈಸಿಯು ಈ ಬಾರಿಯ ಐಪಿಎಲ್ ಹರಾಜಿನ ಮೂಲಕ ನ್ಯೂಝಿಲೆಂಡ್ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಅವರನ್ನು ಖರೀದಿಸಿದೆ.
ವೆಸ್ಟ್ ಇಂಡೀಸ್: ಈ ಬಾರಿಯ ಐಪಿಎಲ್ ಹರಾಜಿನ ಮೂಲಕ ಆರ್ಸಿಬಿ ತಂಡಕ್ಕೆ ವೆಸ್ಟ್ ಇಂಡೀಸ್ ತಂಡದ ವೇಗದ ಬೌಲರ್ ಅಲ್ಝಾರಿ ಜೋಸೆಫ್ ಎಂಟ್ರಿ ಕೊಟ್ಟಿದ್ದಾರೆ. ಅದರಂತೆ ಈ ಎಂಟು ಆಟಗಾರರು ಆರ್ಸಿಬಿ ತಂಡದಲ್ಲಿ ವಿದೇಶಿ ಆಟಗಾರರ ಪಟ್ಟಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.