ಜೋಯಿಡಾದಲ್ಲಿ ಶ್ರದ್ದಾಭಕ್ತಿಯಿಂದ ನಡೆದ ಶ್ರೀ.ಅಯ್ಯಪ್ಪ ಸ್ವಾಮಿ ಪೂಜೋತ್ಸವ

ಜೋಯಿಡಾ : ತಾಲ್ಲೂಕು ಕೇಂದ್ರದಲ್ಲಿರುವ ಶಿವಾಜಿ ವೃತ್ತದ ಸಮೀಪ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಆಶ್ರಯದಡಿ ಗುರುಸ್ವಾಮಿ ಸಿದ್ದು ಜೋಕೇರಿಯವರ ನೇತೃತ್ವದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಪೂಜೋತ್ಸವ ಕಾರ್ಯಕ್ರಮವು ಶನಿವಾರ ರಾತ್ರಿ ಶ್ರದ್ಧಾ ಭಕ್ತಿಯಿಂದ ಜರುಗಿತು

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಪಡಿಪೂಜೆಯು ಜರುಗಿತು. ಮಹಾಪೂಜೆಯಾದ ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.