ಹಳಿಯಾಳ : ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಆಯೋಜಿಸಲಾಗಿದ್ದ ಗೃಹಪಯೋಗಿ ವಸ್ತುಗಳ ತಯಾರಿಕಾ ತರಬೇತಿಯು ಯಶಸ್ವಿಯಾಗಿ ಸಂಪನ್ನಗೊಂಡಿತು.
ಶಿರಸಿಯ ವಿವೇಕಾನಂದ ರಾಯ್ಕರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ತರಬೇತಿಯಲ್ಲಿ ಸ್ವಸಹಾಯ ಸಂಘದ ಮಹಿಳಾ ಸದಸ್ಯರು ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ನಿರ್ದೇಶಕ ಪ್ರಶಾಂತ್ ಬಡ್ಡಿ, ಸಂಸ್ಥೆಯ ಯೋಜನಾ ಸಂಯೋಜಕರಾದ ವಿನಾಯಕ್ ಚೌವ್ಹಾಣ್, ಲೆಕ್ಕಾಧಿಕಾರಿ ಬಾಹುಬಲಿ ಚಿನಗಿ ಹಾಗೂ ಸಂಸ್ಥೆಯ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.