ಜಿಲ್ಲಾ ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಶ್ರದ್ಧಾ ಸಾಮಂತ್ ಪ್ರಥಮ

ದಾಂಡೇಲಿ : ಸಿದ್ದಾಪುರದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪ್ರೌಢಶಾಲಾ ವಿಭಾಗದ ಅಶುಭಾಷಣ ಸ್ಪರ್ಧೆಯಲ್ಲಿ ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ವಿಭಾಗದ 9ನೇ ತರಗತಿಯ ವಿದ್ಯಾರ್ಥಿನಿ ಶ್ರದ್ಧಾ ಸಾಮಂತ್ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾಳೆ.

ಈಕೆಯ ಸಾಧನೆಗೆ ನಗರ ಜೆವಿಡಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಂ.ಎಸ್.ಇಟಗಿ, ಜೆವಿಡಿ ಸಂಯುಕ್ತ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೀಟಾ ಡಯಾಸ್, ಶಾಲಾ ಮುಖ್ಯೋಪಾಧ್ಯಾಯರಾದ ಎಂ.ಬಿ.ಅರವಳ್ಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನವೀನ್ ಕಾಮತ್ ಹಾಗೂ ಶಾಲೆಯ ಶಿಕ್ಷಕ ವೃಂದ ಮತ್ತು ಬೋಧಕೇತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.