ದಾಂಡೇಲಿಯಲ್ಲಿ ಶ್ರದ್ದಾಭಕ್ತಿಯಿಂದ ನಡೆದ ಶ್ರೀ.ಅಯ್ಯಪ್ಪ ಸ್ವಾಮಿಯ ಮಂಡಲ ಪೂಜೆ

ದಾಂಡೇಲಿ : ಕುಳಗಿ ರಸ್ತೆಯಲ್ಲಿರುವ ಶ್ರೀ.ಅಯ್ಯಪ್ಪ ಸ್ವಾಮಿ‌ ಮಂದಿರದಲ್ಲಿ ಶ್ರೀ.ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಆಶ್ರಯದಡಿ ಮಂಡಲ ಪೂಜಾ ಕಾರ್ಯಕ್ರಮವು ಗುರುಸ್ವಾಮಿ ಮೋಹನ ಸನದಿ ಅವರ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿತು.

ಪೂಜಾ ಕಾರ್ಯಕ್ರಮದಲ್ಲಿ ಶ್ರೀ.ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಅಯ್ಯಪ್ಪ ಮಾಲಾಧಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.