ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಭಾಗಿ

ದಾಂಡೇಲಿ : ರಾಜಧಾನಿ ಬೆಂಗಳೂರಿನಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಭಾರತ ಜೋಡೋ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆಯವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲಿಂ ಅಹ್ಮದ್, ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ್, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.