ಹಳಿಯಾಳದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಹಳಿಯಾಳ : ಪಟ್ಟಣದಲ್ಲಿರುವ ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯ್ತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಪಾಟೀಲ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿ ತೋರಣಗಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಾಲಾ ಬ್ರಿಗಾಂಜಾ, ಪಕ್ಷದ ನಗರ ಘಟಕದ ಅಧ್ಯಕ್ಷರಾದ ಶಂಕರ ಬೆಳಗಾಂವಕರ್, ಮಾಜಿ‌ ಜಿ.ಪ.ಸ ಕೈತನಾ ಬಾರ್ಬೋಜಾ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.