ಇಂದು ದಾಂಡೇಲಿಯಲ್ಲಿ ದೇಶಪಾಂಡೆ ಅಧ್ಯಕ್ಷತೆಯಡಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ದಾಂಡೇಲಿ : ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನಾ ಸಭೆಯನ್ನು ಇಂದು ಶುಕ್ರವಾರ ಮಧ್ಯಾಹ್ನ 3.30 ಗಂಟೆಗೆ ನಗರದ ಕಾರ್ಮಿಕ ಭವನದಲ್ಲಿ ಶಾಸಕ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಶಾಸಕರ ಕಾರ್ಯಾಲಯವು ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.