ಗುಂದ ಪ್ರೌಢಶಾಲೆಯ ಶಿಕ್ಷಕರಿಗೆ ಉತ್ತಮ ಶಿಕ್ಷಕರು ಪ್ರಶಸ್ತಿ ಪ್ರದಾನ

ಜೋಯಿಡಾ : ಸತತವಾಗಿ ನಾಲ್ಕು ವರ್ಷಗಳಿಂದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಪ್ರೌಢ ಶಾಲೆಯ ಶಿಕ್ಷಕ, ಶಿಕ್ಷಕಿಯರು ಪಡೆದಿರುತ್ತಾರೆ.

ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿಷಯ ಬೋಧಕ ಶಿಕ್ಷಕ / ಶಿಕ್ಷಕಿ ಯರಿಗೆ ಶಿಕ್ಷಣ ಪರಿಶ್ರಮ ಹಿರಿಮೆಗೆ ಮನ್ನಣೆ ಎಂದು ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕಳೆದ ನಾಲ್ಕು ವರ್ಷಗಳಿಂದ ಗುಂದ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಜೋಸೆಫ್ ಗೊನ್ಸಾಲಿಸ್ , ಸಹ ಶಿಕ್ಷಕರಾದ ಪುರುಷೋತ್ತಮ ಎಚ್. ಜಿ , ನವೀನ್ ಶೇಟ್, ದಿವ್ಯಾ ಚೌಹಾಣ್ ಇವರುಗಳಿಗೆ ಪ್ರಶಸ್ತಿ ನೀಡಲಾಗಿದೆ.

ಡಾ. ಎಚ್. ಎಫ್ ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನದಿಂದ ಕೊಡ ಮಾಡುವ ಈ ಪ್ರಶಸ್ತಿಯನ್ನು ಯಲ್ಲಾಪುರದ ವಿಶ್ವದರ್ಶನ ಪ್ರೌಢ ಶಾಲೆಯಲ್ಲಿ ನಡೆದ ಪ್ರಧಾನ ಸಮಾರಂಭದಲ್ಲಿ ಪ್ರದಾನ ಮಾಡಲಾಯ್ತು. ಪ್ರಶಸ್ತಿಗೆ ಪಾತ್ರರಾದ ಪ್ರೌಢಶಾಲೆಯ ಶಿಕ್ಷಕ ವೃಂದದವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಅಹ್ಮದ್ ಶೇಖ್ ಮತ್ತು ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅನಂತ ದೇಸಾಯಿ ಅಭಿನಂದಿಸಿರುತ್ತಾರೆ.