ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ಭಾರತ (India vs South Africa) ಇನಿಂಗ್ಸ್ ಮತ್ತು 32 ರನ್‌ಗಳ ಸೋಲು ಅನುಭವಿಸಿತು. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಮೂರು ದಿನಗಳ ಒಳಗೆ ಮುಕ್ತಾಯಗೊಂಡ ಪಂದ್ಯದಲ್ಲಿ, ಭಾರತೀಯ ಬ್ಯಾಟರ್‌ಗಳು ಎರಡೂ ಇನ್ನಿಂಗ್ಸ್‌ಗಳಲ್ಲಿ ಕಳಪೆ ಪ್ರದರ್ಶನ ತೋರಿದರು. ಪರಿಣಾಮ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳ ಟೆಸ್ಟ್‌ನಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್ ಮೇಲೆ ಕಣ್ಣಿಟ್ಟಿದೆ. ಹಾಗಾದರೆ, ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?. ಇಲ್ಲಿದೆ ನೋಡಿ ಮಾಹಿತಿ
ಭಾರತ- ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಯಾವಾಗ?
ಜನವರಿ 3, 2024 ರಿಂದ ಜ. 7 ವರೆಗೆ ಭಾರತ vs ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್ ಪಂದ್ಯ ನಡೆಯಲಿದೆ.
ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಎಲ್ಲಿ ಆಡಲಾಗುತ್ತದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಕೇಪ್ ಟೌನ್ನ ನ್ಯೂಲಾಂಡ್ಸ್ನಲ್ಲಿ ನಡೆಯಲಿದೆ.
ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.
ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಹಾಗೂ ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.
ಟೆಸ್ಟ್ ಸರಣಿಗೆ ಉಭಯ ತಂಡಗಳು:
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್.
ದ. ಆಫ್ರಿಕಾ ಟೆಸ್ಟ್ ತಂಡ: ಡೇವಿಡ್ ಬೆಡಿಂಗ್‌ಹ್ಯಾಮ್, ಆಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್ (ನಾಯಕ), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್.