ಬಿ.ಕೆ.ಹಳ್ಳಿಯಲ್ಲಿ ಶ್ರದ್ಧಾಭಕ್ತಿಯಿಂದ‌ ನಡೆದ ಶ್ರೀ.ಅಯ್ಯಪ್ಪ ಸ್ವಾಮಿಯ ಪೂಜೆ ಮತ್ತು ದೀಪೋತ್ಸವ

ಹಳಿಯಾಳ : ತಾಲ್ಲೂಕಿನ ಬಿ.ಕೆ.ಹಳ್ಳಿಯಲ್ಲಿ ಶ್ರೀ.ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಆಶ್ರಯದಡಿ ಶ್ರೀ.ಅಯ್ಯಪ್ಪ ಸ್ವಾಮಿಯ ಪೂಜೋತ್ಸವ ಹಾಗೂ ದೀಪೋತ್ಸವ ಕಾರ್ಯಕ್ರಮವು ಶುಕ್ರವಾರ ಶ್ರದ್ಧಾಭಕ್ತಿಯಿಂದ ಜರುಗಿತು. ಮಹಾಪೂಜೆಯ ನಂತರ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಶಿವಪ್ಪ ಗುರುಸ್ವಾಮಿ ಹಾಗೂ ಆಕಾಶ್ ಗುರುಸ್ವಾಮಿ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ‌ ಜರುಗಿತು. ಪೂಜಾ ಕಾರ್ಯಕ್ರಮದಲ್ಲಿ ಅಯ್ಯಪ್ಪ‌ ಮಾಲಾಧಾರಿಗಳು ಹಾಗೂ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.