ಅಂಕೋಲಾ :ಅಂಕೋಲಾ ತಾಲೂಕಿನ ಮೊಗಟಾ ಗ್ರಾಮದ ಹರಿಜನ ಕೇರಿಯಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ಉದ್ಘಾಟಿಸಿದ್ರು…

ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರೂಪಾಲಿ ಎಸ್ ನಾಯ್ಕ, ಪ್ರಧಾನಮಂತ್ರಿ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಆಯೋಜಿಸಲಾಗಿದೆ. ಕೇಂದ್ರ ಸರ್ಕಾರ ಗ್ರಾಮಸ್ಥರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದ್ರು.

ಈ ಯೋಜನೆಗಳ ಲಾಭವನ್ನು ಪಡೆದ ಫಲಾನುಭವಿಗಳು ದೇಶದ ಪ್ರತಿ ಮನೆಯಲ್ಲೂ ಇದ್ದಾರೆ, ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ಜನರಿಗೂ ತಲುಪಿಸುವುದೇ ಬಿಜೆಪಿ ಪಕ್ಷದ ನರೇಂದ್ರ ಮೋದಿಜೀ ಆಡಳಿತದ ಕೇಂದ್ರ ಸರ್ಕಾರದ ಗುರಿಯಾಗಿದೆ. ಕೇಂದ್ರ ಸರ್ಕಾರದ ಮುದ್ರಾಯೋಜನೆ, ಜನಧನ್ ಯೋಜನೆ, ಪಿ.ಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ,ಕೃಷಿ ಸನ್ಮಾನ್ ಯೋಜನೆ, ಅನ್ನ ಭಾಗ್ಯ ಯೋಜನೆ, ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿ ಎಲ್‌ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದ್ರು..

ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಸಂಘಟಿಸುವುದು, ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಇದರ ಸೌಲಭ್ಯಗಳು ಸಿಗುವಂತೆ ಮಾಡುವ ಈ ಕಾರ್ಯಕ್ರಮವು ಯಶಸ್ವಿಗೊಳಿಸ ಬೇಕಾಗಿದೆ. ಅಧಿಕಾರಿಗಳು ಈ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ಮೂಲಕ ಅರಿವು ಮೂಡಿಸುವಂತಾಗಬೇಕೆಂದು ಮನವಿ ಮಾಡಿದ್ರು..

ಈ ವೇಳೆ ಪ್ರತಿಜ್ಞಾವಿಧಿ ಭೋದಿಸಲಾಯ್ತು. ಕೇಂದ್ರ ಸರ್ಕಾರದಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿಯ ಕಿರುಪುಸ್ತಕ ಹಾಗೂ 2024ರ ಕ್ಯಾಲೆಂಡರ್ ವಿತರಿಸಲಾಯ್ತು. ಈ ಸಂದರ್ಭದಲ್ಲಿ ಬಿಜೆಪಿ ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಉಮೇಶ್ ಭಾಗವತ, ಬಿಜೆಪಿ ಪ್ರಮುಖರಾದ ರಾಜೇಂದ್ರ ನಾಯ್ಕ್, ಜಗದೀಶ್ ನಾಯಕ ಮೊಗಟಾ, ಸುಮಾನಾ ನಾಯಕ ಹಾಗೂ ಮೊಗಟಾ ಹಾಗೂ ಇತರರು ಉಪಸ್ಥಿತರಿದ್ರು..



