ಸರಕಾರದ ಜೊತೆ ಸಮುದಾಯದ ಸಹಭಾಗಿತ್ವ ಇದ್ದಲ್ಲಿ ಶೈಕ್ಷಣಿಕ ಕ್ಷೇತ್ರದ ಪ್ರಗತಿ ಸುಲಭ ಸಾದ್ಯ : ದೇಶಪಾಂಡೆ

ಹಳಿಯಾಳ : ಮಕ್ಕಳ ಭವಿಷ್ಯ ರೂಪಿಸಲಿರುವ ಜ್ಞಾನದೇಗುಲಗಳಿಗೆ ಹೆಚ್ಚಿನ ಪ್ರಾಮುಖ್ಯತೆ, ಪ್ರೋತ್ಸಾಹ ನೀಡಲಾಗುತ್ತಿದ್ದು, ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದ ಜೊತೆ ಸಮುದಾಯವೂ ಕೈ ಜೋಡಿಸಿದರೆ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರು ಅಭಿಪ್ರಯಿಸಿದರು.

ಅವರು ಶನಿವಾರ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಂಜಿನಿಯರಿಂಗ್ ಉಪವಿಭಾಗ ಇವರ ಸಹಯೋಗದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ ಅಂದಾಜು 27.80 ಲಕ್ಷ ರೂ.ಗಳಲ್ಲಿ ಪಟ್ಟಣದ ನಂ.2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾದ ಎರಡು ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಆರ್.ಎಚ್.ಭಾಗವಾನ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಪುರಸಭೆ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.