ಬನವಾಸಿ: ವ್ಯಕ್ತಿಯೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ. ಇಲ್ಲಿನ ಸಂತೆಪೇಟೆ ನಿವಾಸಿ ಮಂಜುನಾಥ ನಾರಾಯಣ ಗುಡಿಗಾರ (47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ತನ್ನ ಹೆಂಡತಿ ಮನೆ ಬಿಟ್ಟು ತವರು ಮನೆಗೆ ಹೋಗಿದ್ದು ಹಾಗೂ ಒಂದುವರೆ ವರ್ಷದಿಂದ ವಿವಾಹ ವಿಚ್ಛೇದನವಾದ ವಿಷಯಕ್ಕೆ ಸಂಬಂಧಿಸಿದಂತೆ ಮನನೊಂದು ಶನಿವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬನವಾಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.