ದಾಂಡೇಲಿ : ಜನವರಿ 22ರಂದು ಅಯೋಧ್ಯೆಯ ಶ್ರೀರಾಮಮಂದಿರದ ಲೋಕಾರ್ಪಣೆಯ ಹಿನ್ನಲೆಯಲ್ಲಿ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ ಮತ್ತು ಆಮಂತ್ರಣ ಪತ್ರಿಕೆಯನ್ನು ಕೋಗಿಲಬನದಲ್ಲಿ ಮನೆ ಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆಯನ್ನು ನೀಡಲಾಯ್ತು.
ಶ್ರೀ.ವೀರಭದ್ರೇಶ್ವರ ಟ್ರಸ್ಟ್ ಕಮೀಟಿಯ ಅಧ್ಯಕ್ಷರಾದ ಚನ್ನಬಸಪ್ಪ ಮುರುಗೋಡ ನೇತೃತ್ವದ ತಂಡ ಈ ಅಭಿಯಾನದಲ್ಲಿ ತೊಡಗಿಸಿಕೊಂಡಿದೆ.