ಬ್ಯಾಂಕಾಕ್​: ಜೈ ಶ್ರೀರಾಮ್​ ಬ್ಯಾನರ್​ ಹಿಡಿದು 13 ಸಾವಿರ ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದ ಯುವತಿ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರ ದ ಬಗ್ಗೆ ವಿಶ್ವದಾದ್ಯಂತ ರಾಮಭಕ್ತರಲ್ಲಿ ಉತ್ಸಾಹ ಕಂಡು ಬರುತ್ತಿದೆ. ಜನವರಿ 22 ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಯಾರೋ ಭಂಡಾರ ಏರ್ಪಡಿಸಿ ಸಂಭ್ರಮಿಸುತ್ತಿದ್ದರೆ ಯಾರೋ ತಲೆಯ ಮೇಲೆ ರಾಮಮಂದಿರದ ಮಾದರಿಯನ್ನು ಹೊತ್ತು ತಿರುಗುತ್ತಿದ್ದಾರೆ. ಇದೀಗ ಉತ್ತರ ಪ್ರದೇಶದ ಯುವತಿಯೊಬ್ಬಳು ಬ್ಯಾಂಕಾಕ್ ನಲ್ಲಿ ಸ್ಕೈ ಡೈವಿಂಗ್ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಯಾಗ್‌ರಾಜ್‌ನ ನಿವಾಸಿಯಾಗಿರುವ 22 ವರ್ಷದ ಅನಾಮಿಕಾ ಶರ್ಮಾ, ಬ್ಯಾಂಕಾಕ್‌ನಲ್ಲಿ 13,000 ಅಡಿ ಎತ್ತರದಿಂದ ಜೈ ಶ್ರೀ ರಾಮ್ ಧ್ವಜದೊಂದಿಗೆ ಸ್ಕೈಡೈವಿಂಗ್ ಮಾಡುವ ಮೂಲಕ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮಮಂದಿರ ಬಗ್ಗೆ ತನಗಿರುವ ಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000 ಕ್ಕೂ ಹೆಚ್ಚು ಮಂದಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ ಸೇರಿದಂತೆ ರಾಜಕೀಯ ಪಕ್ಷಗಳ ದೊಡ್ಡ ನಾಯಕರಿಗೆ ಆಹ್ವಾನ ನೀಡಲಾಗಿದೆ.

ಅಮಿತಾಭ್ ಬಚ್ಚನ್, ಮಾಧುರಿ ದೀಕ್ಷಿತ್, ಅನುಪಮ್ ಖೇರ್, ಅಕ್ಷಯ್ ಕುಮಾರ್, ರಜನಿಕಾಂತ್, ಸಂಜಯ್ ಲೀಲಾ ಬನ್ಸಾಲಿ, ಚಿರಂಜೀವಿ, ಮೋಹನ್ ಲಾಲ್, ಧನುಷ್, ರಣಬೀರ್ ಕಪೂರ್, ಆಲಿಯಾ ಭಟ್, ಅಜಯ್ ದೇವಗನ್, ಸನ್ನಿ ಡಿಯೋಲ್, ಪ್ರಭಾಸ್, ಯಶ್ ಶೆಟ್ಟಿ ಮತ್ತು ರಿಷಬ್ ಸೇರಿದಂತೆ ಚಿತ್ರರಂಗದ ಇತರ ಸೆಲೆಬ್ರಿಟಿಗಳು. ಸಮಾರಂಭಕ್ಕೆ ಆಹ್ವಾನ ಬಂದಿದೆ.