ಸಿದ್ದಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ, ವ್ಯಸನಮುಕ್ತ ಸಮಾಜ ನಿರ್ಮಾಣದ ಜಾಗೃತಿ ಜಾಥಾಕ್ಕೆ ಸ್ಥಳೀಯ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ಕೆ ಚಾಲನೆ ನೀಡಿದ್ರು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಕುಮಾರ್ ಕೆ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಗೊಳ್ಳಬೇಕಾದರೆ ವ್ಯಸನ ಮುಕ್ತ ಸಮಾಜ ನಿರ್ಮಾಣವಾಗಬೇಕು. ಸಾರ್ವಜನಿಕರು ಉತ್ತಮ ಸಮಾಜದ ಹೊಣೆಗಾರರಾಗಿದ್ದು, ನಾವು ನಮ್ಮ ಜವಾಬ್ದಾರಿಯನ್ನು ಅರಿತು, ಕಾನೂನನ್ನು ಗೌರವಿಸಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದ್ರು..
ಇನ್ಸ್ಪೆಕ್ಟರ್ ಕುಮಾರ್ ಕೆ ಅವರ ನೇತೃತ್ವದಲ್ಲಿ ನಡೆದ ಜಾಗೃತಿ ಜಾಥಾ ಪೊಲೀಸ್ ಠಾಣೆಯಿಂದ ಹೊರಟು ಪಟ್ಟಣದ ಹೊಸ ಬಸ್ ನಿಲ್ದಾಣ ಸರ್ಕಲ್ ,ತಿಮ್ಮಪ್ಪ ನಾಯಕ ಸರ್ಕಲ್, ರಾಜಮಾರ್ಗ ಮುಂತಾದ ಕಡೆ ಸಂಚರಿಸಿತು. ಈ ಸಂದರ್ಭದಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಮೆರವಣಿಗೆಯಲ್ಲಿ ಪೊಲೀಸರು ಘೋಷಣೆಗಳನ್ನು ಕೂಗಿದ್ರು..
ಈ ವೇಳೆ ಪಿ ಎಸ್ ಐ ಅನಿಲ್, ಸೇರಿದಂತೆ ಪೊಲೀಸ್ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.