ಹೊನ್ನಾವರ : ತಾಲೂಕಿನ ಕೆಳಗಿನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಪ್ಸರಕೊಂಡದಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದು ಸ್ಥಳೀಯ ನಿವಾಸಿಗಳು ಮನೆ ಬಿಟ್ಟು ಕಾಳಜಿ ಕೇಂದ್ರದಲ್ಲಿ ವಾಸ್ತವ್ಯ ಮಾಡಿದ್ದಾರೆ. ತಹಸೀಲ್ದಾರ್, ಗಣಿ ಇಲಾಖೆ, ಕಂದಾಯ, ನೋಡೆಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
60ಕ್ಕು ಅಧಿಕ ಕುಟುಂಬ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯರಿಗೆ 3 ದಿನ ಮನೆ ಬಿಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಗುಡ್ಡ ಕುಸಿತದ ಭೀತಿಯಲ್ಲಿ ಸ್ಥಳೀಯ ನಿವಾಸಿಗಳಿದ್ದು ಶಾಶ್ವತ ಪರಿಹಾರಕ್ಕೆ ಆಗ್ರಹ ಕೇಳಿ ಬಂದಿದೆ.
ಗ್ರಾಮ ಪಂಚಾಯತ ಅಧ್ಯಕ್ಷ ಗಂಗಾಧರ ಗೌಡ, ಸದಸ್ಯ ಸುರೇಶ ಗೌಡ, ಅಣ್ಣಪ್ಪ ಗೌಡ ಇನ್ನುಳಿದ ಸ್ಥಳೀಯರು, ಪಂಚಾಯತ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು ಸ್ಥಳದಲ್ಲೇ ಇದ್ದು ಕಾಳಜಿ ಕೇಂದ್ರದಲ್ಲಿದ್ದವರಿಗೆ ಸೂಕ್ತ ವ್ಯವಸ್ಥೆ ಒದಗಿಸಿ ಕೊಡುತ್ತಿದ್ದಾರೆ.