ದಾಂಡೇಲಿ ನಗರ ಸಭೆಯ ಆವರಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನಕ್ಕೆ ಚಾಲನೆ

ದಾಂಡೇಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನಕ್ಕೆ ನಗರ ಸಭೆಯ ಆವರಣದಲ್ಲಿ ಶುಕ್ರವಾರ ಚಾಲನೆಯನ್ನು ನೀಡಲಾಯ್ತು.

ಅಭಿಯಾನಕ್ಕೆ ಭಾರತ್ ಅಡುಗೆ ಅನಿಲ‌ ವಿತರಕರಾದ ಮಧು ಅಂಕೋಲೆಕರ್ ಅವರು ದೀಪ‌‌ ಬೆಳಗಿಸಿ ಚಾಲನೆಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ನಗರ ಸಭಾ ಸದಸ್ಯರಾದ ಬುದ್ಧಿವಂತಗೌಡ ಪಾಟೀಲ್, ನಗರ ಸಭೆಯ ವ್ಯವಸ್ಥಾಪಕರಾದ ಪರಶುರಾಮ ಶಿಂಧೆ, ಬಿಜೆಪಿ ತಾಲೂಕು ಅಧ್ಯಕ್ಷರಾದ ಚಂದ್ರಕಾಂತ ಕ್ಷೀರಸಾಗರ್, ಗುತ್ತಿಗೆದಾರರಾದ ಸುಧಾಕರ ರೆಡ್ಡಿ, ಡಾ.ಭಾವನಾ ಅಂಕೋಲೆಕರ್ ಭಾಗವಹಿಸಿದ್ದರು.

ಎಸ್.ಬಿ.ಐ ಬ್ಯಾಂಕಿನ ವ್ಯವಸ್ಥಾಪಕರಾದ ಕೃಷ್ಣರಾಜ್.ಎಂ.ಎಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲ್ವಿಚಾರಕರಾದ ಜಯಕರ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮುದ್ರಾಯೋಜನೆ, ಜನಧನ್ ಯೋಜನೆ, ಪಿ.ಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ, ಕೃಷಿ ಸನ್ಮಾನ್ ಯೋಜನೆ, ಅನ್ನ ಭಾಗ್ಯ ಯೋಜನೆ, ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್‌ಇಡಿ ಪರದೆಯ ಮೂಲಕ ನೀಡಲಾಯ್ತು.

ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕೇಂದ್ರ ಸರ್ಕಾರದಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿಯ ಕಿರುಪುಸ್ತಕ ಹಾಗೂ 2024 ರ ಕ್ಯಾಲೆಂಡರ್ ವಿತರಿಸಲಾಯಿತು.