ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಭಾರತೀಯ ಹವಾಮಾನ ಇಲಾಖೆ ಆ. 7 ರಂದು ಕರಾವಳಿ ಭಾಗದಲ್ಲಿ ‘ರೆಡ್ ಅಲರ್ಟ್’ ಹಾಗೂ 8, 9 ರಂದು “ಆರೆಂಜ್ ಅಲರ್ಟ್’ ಘೋಷಿಸಿದೆ.
ಸಮುದ್ರ ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೆ ತೆರಳಿರುವ ಎಲ್ಲ ದೋಣಿಗಳು ಕೂಡಲೆ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಸೂಚಿಸಿದ್ದಾರೆ.