ದಾಂಡೇಲಿಯಲ್ಲಿ ಗಮನ ಸೆಳೆದ ಧಾರವಾಡದ ಪ್ರಸಾದ್ ಪ್ರಭು ಹಾಗೂ ಸಂಗಡಿಗರ ಭಕ್ತಿ ಸಂಗೀತ ಕಾರ್ಯಕ್ರಮ

ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀ.ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಗೋಕರ್ಣ ಪಾರ್ತಗಾಳಿ ಮಠದ ಪರಮಪೂಜ್ಯ ಶ್ರೀ.ವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಕ್ರವಾರ ಸಂಜೆ ಶ್ರೀ.ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಧಾರವಾಡದ ಪ್ರಸಾದ್ ಪ್ರಭು ಹಾಗೂ ಸಂಗಡಿಗರ ಭಕ್ತಿ ಸಂಗೀತ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಸುಮಧುರ ಕಂಠದ ಹಾಡುಗಳು ನೆರೆದಿದ್ದ ಎಲ್ಲರನ್ನು ಭಕ್ತಿ ಮಾರ್ಗದತ್ತ ಕೊಂಡೊಯ್ಯಲು ಪ್ರೇರಣೆಯಾಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ಹಾಗೂ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.