ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ : ಆರ್.ವಿ.ದೇಶಪಾಂಡೆ

ದಾಂಡೇಲಿ : ಶಿಕ್ಷಣ ಕ್ಷೇತ್ರ ಬಲಿಷ್ಠಗೊಂಡಾಗ ದೇಶದ ಪ್ರಗತಿ ಸುಲಭ ಸಾದ್ಯ ಈ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಸರಕಾರ ವಿಶೇಷ ಆದ್ಯತೆಯನ್ನು ನೀಡುತ್ತಾ ಬಂದಿದೆ. ಸಮುದಾಯದ ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವ ಇದ್ದಾಗ ಶೈಕ್ಷಣಿಕ ಕ್ಷೇತ್ರದ ಪ್ರಗತಿ ಸಾಧ್ಯ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಹೇಳಿದರು.

ಅವರು ಶನಿವಾರ ನಗರದ ಮಿರಾಶಿಗಲ್ಲಿಯಲ್ಲಿ ವೆಸ್ಟ್ ಕೋಸ್ಟ್ ಕಾರ್ಖಾನೆಯ ಸಿಎಸ್ಆರ್ ಯೋಜನೆಯಡಿ ನೂತನವಾಗಿ ನಿರ್ಮಾಣ ಮಾಡಲಾದ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾಗದ ಕಾರ್ಖಾನೆ ತನ್ನ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿ ಜನಪಯೋಗಿ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾಗಿದೆ. ನೂತನ ಅಂಗನವಾಡಿ ಕೇಂದ್ರ ಈ ಭಾಗದ ಪುಟಾಣಿ ಮಕ್ಕಳ ಶೈಕ್ಷಣಿಕ ಬದುಕಿಗೆ ಸ್ಪೂರ್ತಿಯಾಗಲಿ ಎಂದರು.

ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಉಳಿತಾಯ ಪುಸ್ತಕವನ್ನು ಈ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆಯವರು ವಿತರಿಸಿದರು.

ವೇದಿಕೆಯಲ್ಲಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಹಿದಾ ಪಠಾಣ್, ನಗರಸಭೆಯ ನಿಕಟಪೂರ್ವ ಅಧ್ಯಕ್ಷೆ ಸರಸ್ವತಿ ರಜಪೂತ್, ನಗರ ಸಭೆಯ ಸದಸ್ಯರಾದ ರೋಶನಜಿತ್, ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್ ಹೆಗಡೆ ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಅನುಸೂಯ ರೇಡೇಕರ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.