ಸಿದ್ದಾಪುರದಲ್ಲಿ ಅದ್ದೂರಿಯಾಗಿ ನಡೆದ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ

ಸಿದ್ದಾಪುರ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಹೋಲುವ ಜಿಲ್ಲೆಯ ಏಕೈಕ ಅಯ್ಯಪ್ಪ ಸ್ವಾಮಿ ದೇವಾಲಯವಾದ ಸಿದ್ದಾಪುರ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷ ವು ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು ಬುಧವಾರ ದಿಂದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಅದ್ದೂರಿಯಾಗಿ ನಡೆಯುತ್ತಿದೆ.

ಪ್ರತಿ ನಿತ್ಯ ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತರು ಪಾಲ್ಗೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿ ದಿನ ಸಂಜೆ ಸಂಸ್ಕೃತಿಕ, ಮನರಂಜನೆ ಕಾರ್ಯಕ್ರಮಗಳು ನಡೆಯುತ್ತಿವೆ.ಜಾತ್ರೋತ್ಸವ ಆರಂಭದಿಂದ ಭಕ್ತರು ಪ್ರತಿನಿತ್ಯ ದೇವರಿಗೆ ವಿಶೇಷವಾದ ಪೂಜೆಯಲ್ಲಿ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು ಶನಿವಾರದಂದು ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಸುಮಾರು 8,000 ಹೆಚ್ಚು ಭಕ್ತರು ಪಾಲ್ಗೊಂಡು ದೇವರ ಪ್ರಸಾದವನ್ನು ಸ್ವೀಕರಿಸಿದರು.


ಮನರಂಜನೆ ಆಟಿಕೆಗಳಲ್ಲಿ ಸಾರ್ವಜನಿಕರು ಸಂಭ್ರಮಿಸುತ್ತಿದ್ದಾರೆ. ದೇವಾಲಯದ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟು ಭಕ್ತರು ಖುಷಿ ಪಡುತ್ತಿರುವ ದೃಶ್ಯ ಕಂಡುಬರುತ್ತಿದೆ