ದಾಂಡೇಲಿಯಲ್ಲಿ ಗಮನ ಸೆಳೆದ ಚಿಂತನ ರಾಮಾಯಣ ಕಾರ್ಯಕ್ರಮ

ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀ.ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಗೋಕರ್ಣ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀ.ವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ.ವಿದ್ಯಾಧಿರಾಜ ಸಭಾಭವನದಲ್ಲಿ ಪ್ರಸಿದ್ಧ ಕಲಾವಿದರಾದ ಧಾರವಾಡದ ಸುಜಯ್ ಶಾನಭಾಗ್ ಹಾಗೂ ಬಳಗದವರಿಂದ ನಡೆದ ಚಿಂತನ ರಾಮಾಯಣ ಕಾರ್ಯಕ್ರಮವು ಅಪಾರ ಜನಾಕರ್ಷಣೆಗೆ ಪಾತ್ರವಾಯಿತು.

ಕಾರ್ಯಕ್ರಮವನ್ನು ವೀಕ್ಷಿಸಿದ ಪೂಜ್ಯ ಪರ್ತಗಾಳಿ ಶ್ರೀಗಳು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಸುಜಯ್ ಶಾನಭಾಗ್ ಹಾಗೂ ಅವರ ಬಳಗದವರಿಗೆ ಶುಭಾಶೀರ್ವಾದವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ಹಾಗೂ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.