ಜೋಯಿಡಾ : ತಾಲ್ಲೂಕಿನ ಯರಮುಖದ ಕೃಷಿ ಸಹಕಾರಿ ಸಂಘದಲ್ಲಿ ತೆರವಾಗಿರುವ ಸಾಲಗಾರ ಸಾಮಾನ್ಯ ಕ್ಷೇತ್ರದ ಒಂದು ಸ್ಥಾನಕ್ಕೆ ಜನವರಿ 28ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಅಭ್ಯರ್ಥಿಯಾಗಿ ಪ್ರಗತಿಪರ ಕೃಷಿಕರಾದ ಸುಬ್ರಾಯ ದಬಗಾರ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ಸಹಕಾರಿ ಸಂಘದ ವ್ಯವಸ್ಥಾಪಕರಿಗೆ ನಾಮಪತ್ರವನ್ನು ಸಲ್ಲಿಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡುತ್ತಾ, ಸಂಘದ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಸುಬ್ರಾಯ ದಬಗಾರ ಅವರು ಹೇಳಿದರು.