ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿವಾಜಿ ಮಾದಪ್ಪಗೌಡ

ಹಳಿಯಾಳ : ಬೆಳವಟಗಿ ಗ್ರಾಮದ ಶಿವಾಜಿ ಮಾದಪ್ಪಗೌಡ ಇವರು ಬಿಹಾರದಲ್ಲಿ ಆಯೋಜಿಸಲಾಗಿದ್ದ 58ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪನಲ್ಲಿ ಭಾಗವಹಿಸಿ ಪುರುಷರ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮುಡಿಗೇರಿಸಿಕೊಂಡು ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಶಿವಾಜಿ ಮಾದಪ್ಪಗೌಡ ಅವರಿಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಅಭಿನಂದನೆ ಸಲ್ಲಿಸಿ ಭವಿಷ್ಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಇನ್ನೂ ಹೆಚ್ಚಿನ ಪದಕಗಳನ್ನು ಗಳಿಸುವಂತೆ ಶುಭ ಹಾರೈಸಿದ್ದಾರೆ.