ದಾಂಡೇಲಿ : ತಾಲ್ಲೂಕಿನ ಆಲೂರಿನ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಕಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಮಲ್ಲಿಕಾರ್ಜುನ ತಲ್ಲೂರ ಅವರು ಗುರುವಾರ ನಸುಕಿನ ವೇಳೆಯಲ್ಲಿ ವಿಧಿವಶರಾದರು. ಮೃತರಿಗೆ 42 ವರ್ಷ ವಯಸ್ಸಾಗಿತ್ತು.
ಕಳೆದ ಮೂರು ವರ್ಷಗಳಿಂದ ಆಲೂರು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಕಿರಿಯ ಪಶು ವೈದ್ಯಕೀಯ ಪರೀಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದರು. ಮೂಲತ: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಿವಾಸಿಯಾಗಿರುವ ಮೃತರು ಕುಟುಂಬ ಸಮೇತರಾಗಿ ದಾಂಡೇಲಿಯಲ್ಲಿ ವಾಸವಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಸುಪುತ್ರಿಯನ್ನು ಹಾಗೂ ಅಪಾರ ಸಂಖ್ಯೆಯಲ್ಲಿ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಶಾಸಕರಾದ ಆರ್.ವಿ.ದೇಶಪಾಂಡೆ, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಕೆ.ಎಂ.ನದಾಫ್ ಹಾಗೂ ಪಶುವೈದ್ಯ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಮತ್ತು ಆಲೂರು ಗ್ರಾಮಸ್ಥರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.