ದಾಂಡೇಲಿ : ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜ.20 ರಂದು ಶನಿವಾರ ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 5.30ರವರೆಗೆ ದಾಂಡೇಲಿ ನಗರದ ಹೆಸ್ಕಾಂ ಉಪ ವಿಭಾಗಿಯ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ಈ ಸಭೆಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿದ್ಯುತ್ ಗೆ ಸಂಬಂಧಿಸದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.